ಕೂಗು ನಿಮ್ಮದು ಧ್ವನಿ ನಮ್ಮದು

ಉಚಗಾಂವ್ ದೇವಸ್ಥಾನ ನಿರ್ಮಾಣಕ್ಕೆ ಅನುದಾನ ಹಸ್ತಾಂತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್  

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಮಹಾದೇವ ಮಂದಿರದ ನಿರ್ಮಾಣದ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಶಾಸಕರ ನಿಧಿಯಿಂದ 10 ಲಕ್ಷ ರೂ. ನೀಡಿದ್ದಾರೆ. ಇದರ ಪೈಕಿ ಮೊದಲ ಕಂತಿನಲ್ಲಿ 5.40 ಲಕ್ಷ ರೂ,ಗಳ ಚೆಕ್ ನ್ನು ಹೆಬ್ಬಾಳಕರ್ ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಿದರು. ಗ್ರಾಮಸ್ಥರಿಗೆ ನೀಡಿದ ಭರವಸೆಯನ್ನು ಈಡೇರಿಸಿದ್ದೇನೆ. ನಾನು ನೀಡಿದ ಯಾವ ಭರವಸೆಯೂ ಹುಸಿಯಾಗುವುದಿಲ್ಲ. ಕ್ಷೇತ್ರದ ಜನರು ನನ್ನ ಮೇಲಿಟ್ಟಿರುವ ವಿಶ್ವಾಸದಿಂದಾಗಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವ ಕೆಲಸವನ್ನು ಮುಂದುವರಿಸಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.‌ ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಯುವರಾಜ ಕದಂ, ದೇವಸ್ಥಾನದ ಕಮೀಟಿಯವರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!