ಬೆಳಗಾವಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಇಂದು ಸಂಜೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮಹಾಮಾರಿ ಕೊರೋನಾ ಸೊಂಕಿನಿಂದ ಬಳಲುತ್ತಿದ್ದ ಸುರೇಶ್ ಅಂಗಡಿ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೇ ತಿಂಗಳ 11 ನೇ ತಾರೀಖಿನಂದು ಸುರೇಶ್ ಅಂಗಡಿ ಅವರಿಗೆ ಕೊರೊನಾ ಧೃಡಪಟ್ಟಿತ್ತು. ನೆಚ್ಚಿನ ನಾಯಕನ ಅಗಲಿಕೆಯಿಂದ ಬೆಳಗಾವಿ ಜಿಲ್ಲೆಯ ಜನರಲ್ಲಿ ದಿಘ್ಭ್ರಮೆ ಮೂಡಿದ್ದು, ಅಂಗಡಿ ಅವರ ನಿಧನಕ್ಕೆ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.