ಕೂಗು ನಿಮ್ಮದು ಧ್ವನಿ ನಮ್ಮದು

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ: ಬೆಳೆ ನಾಶದಿಂದ ಹೊಸಪೇಟೆ ರೈತನ ಕಣ್ಣಿರು

ಹೊಸಪೇಟೆ: ನಿರಂತರ ಮಳೆ ಸುರಿದ ಪರಿಣಾಮ ನಾಲ್ಕು ನೂರು ಎಕರೆಗೂ ಹೆಚ್ಚು ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳದ ಬೆಳೆ ಸಂಪೂರ್ಣ ನಾಶವಾದ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ, ಹಿರೇಕೊಳಚಿ, ಹಗರನೂರು ಗ್ರಾಮಗಳಲ್ಲಿ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮ ಈ ಬಾಗದ ಹಳ್ಳಕೊಳ್ಳಗಳು ಉಕ್ಕಿ ಹರಿದು ಇಲ್ಲಿನ ಹಗರನೂರು ಕೆರೆಗೆ ನೀರು ಹರಿದು ಬಂದಿದೆ. ಕೆರೆಯ ಹಿನ್ನೀರಿನ ಪ್ರದೇಶದಲ್ಲಿ ರೈತರು ಬೆಳೆದ ಬೆಳೆ ಸಂಪೂರ್ಣ ಜಲಾವೃತವಾಗಿದೆ. ಇನ್ನು ರೈತರು ಬೆಳೆದ ಮೆಕ್ಕೆಜೋಳದ ಬೆಳೆಗೆ ಬೆಂಬಲ ಬೆಲೆ ಘೋಷಣೆಮಾಡುವ ನಿರೀಕ್ಷೆ ಇಟ್ಟುಕೊಂಡ ರೈತರು ಬೆಳೆದ ಬೆಳೆಯನ್ನ ಕಟಾವು ಮಾಡದೆ ಜಮೀನಿನಲ್ಲಿ ಹಾಗೆ ಬಿಟ್ಟಿದ್ದರು. ಆದ್ರೆ ಇತ್ತೀಚೆಗೆ ಏಕಾಏಕಿ ಮಳೆ ಸುರಿದ ಪರಿಣಾಮ ರೈತರ ಜಮೀನನಲ್ಲಿದ್ದ ಕಟಾವಿಗೆ ಬಂದ ಬೆಳೆ ಸಂಪೂರ್ಣ ಜಲಾವೃತವಾಗಿ ನಾಶವಾಗಿದೆ. ಇನ್ನು ನಮ್ಮ ಇಂದಿನ ಈ ಪರಿಸ್ಥಿತಿಗೆ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಕಾರಣ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಸರ್ಕಾರ ಈ ಮೊದಲೇ ಮೆಕ್ಕೆಜೋಳದ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಘೋಷಣೆಮಾಡಿದ್ದರೆ ನಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಗೋಳು ತೋಡಿಕೊಂಡಿದ್ದಾರೆ.

error: Content is protected !!