ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋದ ಯುವಕ ನೀರು ಪಾಲಾಗಿದ್ದಾನೆ. ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಚಿಗಡೊಳ್ಳಿ ಗ್ರಾಮದಲ್ಲಿ ನಿನ್ನ ಸಂಜೆ ಈ ನಡೆದ ಘಟನೆ ನಡೆದಿದೆ. ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಯುವಕ 19 ವರ್ಷದ ರುದ್ರಪ್ಪ ವಕ್ಕುಂದ ನೀರು ಪಾಲಾಗಿದ್ದಾನೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ಯುವಕನ ಶೋಧ ಕಾರ್ಯ ನಡೆಸುತ್ತಿವೆ. ಎನ್.ಡಿ.ಆರ್.ಎಫ್, ಸ್ಥಳೀಯ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಮತ್ತು ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನುರಿತ ಈಜು ತಜ್ಞರು, ಸ್ಥಳೀಯ ಈಜುಗಾರರು ಸೇರಿದಂತೆ ಎನ್.ಡಿ.ಆರ್.ಎಫ್ ತಂಡ ಬೋಟ್ ಬಳಸಿ ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದಾರೆ. ಇನ್ನು ಕುಟುಂಬಸ್ಥರು, ಗ್ರಾಮಸ್ಥರು ಘಟನಾ ಸ್ಥಳದಲ್ಲೇ ಬೀಡು ಬಿಟ್ಡಿದ್ದು, ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಇನ್ನು ಘಟನೆ ಸಂಬಂಧ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.