ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇದೀಗ ಸಿಬಿಐ ಸಂಕಷ್ಟ ಎದುರಾಗಿದೆ. ಬೆಳಿಗ್ಗೆ 6 ಗಂಟೆಗೆ ಡಿ.ಕೆ.ಶಿವಕುಮಾರ್ ಮನೆ ಮೆಲೆ ಸಿಬಿಐ ದಾಳಿ ನಡೆದಿದೆ. ಬೆಳಿಗ್ಗೆ 6 ಗಂಟೆಯಿಂದ ಸಿಬಿಐ ಶೋಧಕಾರ್ಯ ನಡೆಸಿದೆ. ಡೆ.ಕೆ.ಶಿವಕುಮಾರ್ ಮನೆ, ಕಚೇರಿ ಸೇರಿ ಅವರಿಗೆ ಸಮನಬಂಧಿಸಿದ ಹಲವು ಕಡೆ ಏಕ ಕಾಲಕ್ಕೆ ಈ ದಾಳಿ ನಡೆದಿದೆ. ಇಡಿ ವಿಚಾರಣೆ ಬಳಿಕ ಇದೀಗ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಸಂಕಷ್ಟ ಎದುರಾಗಿದೆ. ಅಣ್ಣನ ಜೊತೆಗೆ ತಮ್ಮ ಡಿ.ಕೆ.ಸುರೇಶ ಗೂ ಸಂಕಷ್ಟ ಎದುರಾಗಿದೆ. ಡಿ.ಕೆ.ಸುರೇಶ್ ಮನೆ ಮೇಲೂ ಸಿಬಿಐ ದಾಳಿ ನಡೆದಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿನ ನಿವಾಸ ಸೇರಿ ಕನಕಪುರದಲ್ಲೂ ಈ ದಾಳಿ ನಡೆದಿದ್ದು, ಈಗಾಗಲೇ ಈಡಿ ವಿಚಾರಣೆಯನ್ನು ಕೂಡ ಡಿ.ಕೆ.ಶಿವಕುಮಾರ್ ಎದುರಿಸುತ್ತಿದ್ದಾರೆ. ಇನ್ನು ದಾಳಿ ವೇಳೆ ಮಹತ್ವದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದ್ದು, ಸಿಬಿಐ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ ನಡೆದಿದ್ದು, 5 ಜನ ಸಿಬಿಐ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಸಿಬಿಐ ದಾಳಿಗೆ ರಾಜ್ಯ ಸರ್ಕಾರ ಅನುಮತಿ ಕೂ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇನ್ನು ಈ ಅನಿರಿಕ್ಷತ ದಾಳಿಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಬಿಗ್ ಶಾಕ್ ನೀಡಿದೆ.