ರಾಯಚೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿ ವಿಚಾರ ರಾಯಚೂರಿನಲ್ಲಿ ಸಚಿವ ಕೆ.ಎಸ್.ಈಶ್ಚರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದಾಗ ಹವಾಲ ಹಣ ಸಿಕ್ಕಿದೆ. ಹಲವು ದಾಖಲೆಗಳು ಸಿಕ್ಕಿದರಿಂದ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಡಿ.ಕೆ.ಶಿವಕುಮಾರ್ ಸೀತೆಯಷ್ಟು ಪವಿತ್ರವಾಗಿ ಕೇಸ್ ನಿಂದ ಹೊರಗೆ ಬರಲಿ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಈಶ್ವರಪ್ಪ ವಾಲ್ಮೀಕಿ ಜನಾಂಗಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿ, ಸ್ವಾತಂತ್ರ್ಯ ಪೂರ್ವದಿಂದಲೂ ಕುರುಬರಿಗೆ ಎಸ್.ಟಿ ನೀಡುವ ವಿಚಾರ ಚರ್ಚೆ ನಡೆಯುತ್ತಿದೆ. ಅಲ್ಲದೇ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಕಸಿದುಕೊಳ್ಳುವುದಿಲ್ಲ. ಹಿಂದುಳಿದ ಯಾವ ಸಮಾಜಕ್ಕೆ ಎಸ್.ಟಿ ನೀಡಬೇಕು ಎಂಬ ಕೂಗಿಗೆ ನನ್ನ ಬೆಂಬಲವಿದೆ. ಒಂದು ಪಾಯಿಂಟ್ ಮೀಸಲಾತಿಯೂ ವಾಲ್ಮೀಕಿ ಸಮಾಜದಿಂದ ಕಿತ್ತುಕೊಳ್ಳುವುದಿಲ್ಲ ಎಂದಿದ್ದಾರೆ. ಇನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಪ್ರಧಾನಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಯಾರೋ ತಲೆಹರಟೆಗಳು ಮಾಡಿರಬಹುದು ಎಂದಷ್ಟೇ ಹೇಳಿದ್ರು.