ಕೂಗು ನಿಮ್ಮದು ಧ್ವನಿ ನಮ್ಮದು

ದೆಹಲಿಯಲ್ಲೇ ಸಚಿವ ಸುರೇಶ ಅಂಗಡಿ ಅಂತ್ಯಕ್ರಿಯೆ : ಕುಟುಂಬ ವರ್ಗದವರಿಗೆ ದೆಹಲಿಗೆ ಬರುವಂತೆ ಸೂಚನೆ

ದೆಹಲಿ: ರೈಲ್ವೆ ಇಲಾಖೆ ರಾಜ್ಯ ಸಚಿವ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ಏಮ್ಸ್ ವೈದ್ಯರು ಬಿಡುತ್ತಿಲ್ಲ ಎನ್ನಲಾಗುತ್ತಿದೆ. ಕೊರೊನಾ ಸೋಂಕಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಕೊನೆಯುಸಿರೆಳೆದಿದ್ದರು.

ಮತ್ತೆ ಹುಟ್ಟಿ ಬನ್ನಿ ಸರ್

ಹೀಗಾಗಿ ಅವರ ಪಾರ್ಥೀವ ಶರೀರವನ್ನು ಅವರ ತವರು ಜಿಲ್ಲೆ ಬೆಳಗಾವಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸುವಂತೆ ಏಮ್ಸ್ ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಸದ ಈರಣ್ಣ ಕಡಾಡಿ ಹಾಗೂ ಸಚಿವ ವಿ.ಸೋಮಣ್ಣ ಏಮ್ಸ್ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ ಆಸ್ಪತ್ರೆ ವೈದ್ಯರು ಪಟ್ಟು ಸಡಿಲಿಸುತ್ತಿಲ್ಲ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿಯೇ ನಡೆಯಲಿದೆ ಎನ್ನಲಾಗುತ್ತಿದ್ದು, ದೆಹಲಿಯ ಲೋಧಿ ಎಸ್ಟೇಟ್ ಚಿತಾಗಾರದಲ್ಲಿ ನಾಳೆ ಕೊರೊನಾ ನಿಯಮದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದಿದ್ದು, ಕುಟುಂಬ ವರ್ಗದವರು ದೆಹಲಿಗೆ ಬರುವಂತೆ ಈಗಾಗಲೇ ಸೂಚಿಸಿದ್ದಾರೆ ಎನ್ನಲಾಗಿದೆ.

error: Content is protected !!