ಬೆಳಗಾವಿ: ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಾಗಿದೆ. ಸೊಂಕಿತರ ಚಿಕಿತ್ಸೆಗೆ ಎಲ್ಲ ವ್ಯೆವಸ್ಥೆ ಮಾಡಿದ್ದೇವೆ ಎಂದು ಜಿಲ್ಲಾಡಳಿತ ಸಮರ್ಥನೆ ಮಾಡಿಕೊಂಡ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮೊತ್ತೊಂದು ಘಟನೆ ನಡೆದಿದೆ. ಮೂವತ್ತು ವರ್ಷದ ಯುವತಿ ಆಸ್ಪತ್ರೆಯಲ್ಲಿ ನರಳಾಡಿ ಜೀವ ಬಿಟ್ಟಿರುವ ಅಮಾನವೀಯ ಘಟನೆಗೆ ಬಿಮ್ಸ್ ಆಸ್ಪತ್ರೆ ಸಾಕ್ಷಿಯಾಗಿದೆ. ನಿನ್ನೆಯಷ್ಟೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ 65 ವರ್ಷದ ವೃದ್ಧನೊಬ್ನ ನರಳಿ, ನರಳಿ ಜೀವ ಬಿಟ್ಟ ಬೆನ್ನಲ್ಲಿಯೇ ಮೂವತ್ತು ವರ್ಷದ ಯುವತಿ ಅದೇ ರೀತಿ ಮೃತಪಟ್ಟಿದ್ದು, ಬಿಮ್ಸ್ ಆಸ್ಪತ್ರೆ ಮೃತ್ಯು ಕೂಪವಾಗ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ.
ಬಿಮ್ಸ್ ಆಸ್ಪತ್ರೆಯಲ್ಲಿ ನರಳಿ ನರಳಿ ಮೃತಪಟ್ಟ 30 ವರ್ಷದ ಯುವತಿಯ ಕೊನೆಯ ಘಳಿಗೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಕಾಗವಾಡ ತಾಲೂಕಿನ ಗ್ರಾಮವೊಂದರ 30 ವರ್ಷದ ಯುವತಿ ಸಾವನ್ನಪ್ಪಿದ್ದು, ಈ ಯುವತಿ ತೀವ್ರ ಮಧುಮೇಹದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಯುವತಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿದಾಗ ಕೊರೊನಾ ದೃಢವಾಗಿತ್ತು. ಬಳಿಕ ಕೊವಿಡ್ ವಾರ್ಡ್‌ಗೆ ಈ ಯುವತಿಯನ್ನು ಶಿಫ್ಟ್ ಮಾಡಲಾಗಿತ್ತು. ಯುವತಿ ಮಧುಮೇಹದಿಂದ ಬಳಲುತ್ತಿದ್ದರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.