ಕೂಗು ನಿಮ್ಮದು ಧ್ವನಿ ನಮ್ಮದು

ಯೋಗಯುಕ್ತ ಜೀವನ ರೂಢಿಸಿಕೊಳ್ಳಿ: ಸಚಿವ ರಮೇಶ್ ಜಾರಕಿಹೊಳಿ‌ ಕರೆ

ಗೋಕಾಕ್: ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕರೆ ನೀಡಿದರು. ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದರು.

ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ ಉಲ್ಬಣಿಸುತ್ತಿರುವ ಈ ಸಂದರ್ಭದಲ್ಲಿ ಇಂದಿನ‌ ಯುವಜನರು ತಮ್ಮ ಆರೋಗ್ಯ ರಕ್ಷಣೆಗೆ ಪ್ರಥಮ ಆದ್ಯತೆ ಕೊಡಬೇಕು ಎಂದು ಸಚಿವ ಜಾರಕಿಹೊಳಿ‌ ಹೇಳಿದರು.

error: Content is protected !!