ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಗುರುವಾರ ರಾತ್ರಿ 7.30 ರ ಸಮಯದಲ್ಲಿ ಕರ್ನಾಟಕ ಸರ್ಕಾರದ ಕೃಷಿ ಸಚಿವ ಬಿ.ಸಿ.ಪಾಟೀಲರು ಕುಟುಂಬ ಸಮೇತರಾಗಿ ಆಗಮಿಸಿದ್ದರು. ಶ್ರೀಮಲೈ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದು ಸ್ವಾಮಿಗಳ ಕೃಪೆಗೆ ಪಾತ್ರರಾದರು. ಮಹದೇಶ್ವರ ದರ್ಶನದ ನಂತರ ದೇವಾಲಯ ಪ್ರಾಧಿಕಾರದಿಂದ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಣೆ ಪಡೆದರು. ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳನ್ನು ಕಂಡು ಸಚಿವ ಬಿ.ಸಿ.ಪಾಟೀಲ್ ತುಂಬಾ ಖುಷಿಪಟ್ಟರು ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಉಪ-ಕಾರ್ಯದರ್ಶಿ ರಮೇಶ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್‌ರವರು ಎಲ್ಲ ಅಗತ್ಯ ಮಾಹಿತಿ ಒದಗಿಸಿದರು .