ಕೂಗು ನಿಮ್ಮದು ಧ್ವನಿ ನಮ್ಮದು

ಸ್ಯಾಂಡಲ್ ವುಡ್ ಡ್ರಗ್ಸ್ ಗಾಟಿನ ಎಫೆಕ್ಟ್ – ನಟಿ ಸಂಜನಾ ಗಿಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರ ರೇಡ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಬೆಂಗಳೂರಿನ ಇಂದಿರಾ ನಗರದಲ್ಲಿರುವ ಸಂಜನಾ ಗಿಲ್ರಾನಿ ಫ್ಲಾಟ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲೇ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ನಟಿ ಸಂಜನಾ ಗಿಲ್ರಾನಿ ಆಪ್ತ ರಾಹುಲ್‌ ಈಗಾಗಲೇ ಸಿಸಿಬಿ ವಶದಲ್ಲಿದ್ದು, ಆತ ನೀಡಿದ ಮಾಹಿತಿ ಆಧಾರದ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಸಂಜನಾ ನಿವಾಸದ ಮೇಲೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಪುನೀತ್ ಕುಮಾರ್, ಅಂಜುಮಾಲ್ ನೇತೃತ್ವದ ತಂಡ ಸಂಜನಾ ನಿವಾಸದಲ್ಲಿ ಪರಿಶೀಲನೆ ನಡೆಸಿದೆ. ಅಲ್ಲದೇ ಮನೆಯಲ್ಲಿ ಸಂಜನಾ ವಿಚಾರಣೆಗೊಳ ಪಡಿಸಿದ್ದಾರೆ. ನಟಿ ಸಂಜನಾಗೆ ಸೇರಿದ ಮೂರು ಮೊಬೈಲ್ ಪೋನ್ ವಶಕ್ಕೆ ಪಡೆದಿದ್ದು, ನಟಿ ಸಂಜನಾ ಗಿಲ್ರಾನಿ ತನಿಖೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ. ಈ ಹಿಂದೆ ನಟಿ ರಾಗಿಣಿಯ ಮನೆ ಮೇಲೂ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ವಿಚಾರಣೆಗೆ ಕರೆಸಿಕೊಂಡು ಬಂಧಿಸಿದ್ದನ್ನು ಇಲ್ಲಿ ಮೆಲುಕು ಹಾಕಬಹುದು.

error: Content is protected !!