ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬಸವೇಶ್ವರ ಮಂದಿರ ನಿರ್ಮಾಣಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿದ್ದು, ಮಂದಿರ ನಿರ್ಮಾಣ ಕಾರ್ಯ ಕುರಿತು ಶನಿವಾರ ಗ್ರಾಮದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ದೇವಸ್ಥಾನ ನಿರ್ಮಾಣದ ರೂಪುರೇಷೆ ಕುರಿತಂತೆ ಗ್ರಾಮದ ಹಿರಿಯರು, ಮಹಿಳೆಯರು ಸೇರಿದಂತೆ ಸಮಸ್ತ ಭಕ್ತರೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶೀಘ್ರದಲ್ಲೇ ಕಟ್ಟಡ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಾಗುವುದು ಎಂದು ತಿಳಿಸಿದರು.
ಗ್ರಾಮಸ್ಥರ ಆಶಯದಂತೆ ಹಣ ಮಂಜೂರು ಮಾಡಿಸಲಾಗಿದೆ. ಜನರ ನೆಮ್ಮದಿ ಮುಖ್ಯವಾಗಿದ್ದು, ಭಕ್ತರ ಅಪೇಕ್ಷೆಯಂತೆ ದೇವಸ್ಥಾನ ನಿರ್ಮಾಣ ಮಾಡಲಾಗುವುದು. ಇದಕ್ಕೆ ಎಲ್ಲ ರೀತಿಯ ತನು -ಮನ ಸಹಕಾರವನ್ನು ನೀಡಬೇಕು ಎಂದು ಹೆಬ್ಬಾಳಕರ್ ವಿನಂತಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ನಾಗೇಶ ದೇಸಾಯಿ, ಈರಪ್ಪ ಸುಳೇಭಾವಿ, ಸದು ಪಾಟೀಲ, ಶಿವಾಜಿ ದೇಸಾಯಿ, ಲಕ್ಷ್ಮಣ ಕೊಳೆಪ್ಪಗೋಳ, ಮಹೇಶ ಕುಲಕರ್ಣಿ, ಪ್ರಶಾಂತ ಗಿರಿಮಲ್, ಸಂತೋಷ ದೇಸಾಯಿ, ಗುರುನಾಥ ಅಷ್ಟೇಕರ್, ಖಯ್ಯುಮ ಅತ್ತಾರ, ಉಲ್ಲಾಸ ಬೊಮ್ಮನವಾಡಿ, ದೇವಸ್ಥಾನ ಕಮೀಟಿಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.