ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರಿಂದ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. KSRTC ಬಸ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ ಬಸ್ ಅಡಿಯಲ್ಲಿ ಸಿಲುಕಿಕೊಂಡಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಲಕ್ಷ್ಮಣ್ ನಿಂಬರಗಿ ದೌಡಾಯಿಸಿ ಬಂದಿದ್ದು
ಕ್ರೇನ್ ಮೂಲಕ ಕಾರು ಹೊರ ತೆಗೆಯಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ.
ಬೆಳಗಾವಿಯಿಂದ ಇಲಕಲ್ ಕಡೆಗೆ ಹೊರಟಿದ್ದ ಬಸ್ ಗೆ ಯರಗಟ್ಟಿ ಕಡೆಯಿಂದ ಬೆಳಗಾವಿಗೆ ಹೊರಟಿದ್ದ KA-22 MB 6433 ಸಂಖ್ಯೆಯ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲಿಸರು ತನಿಖೆ ನಡೆಸಿದ್ದಾರೆ.