ಅಪ್ಪು ಸಮಾಧಿಗೆ ಕುಟುಂಬದಿಂದ ನಡೆಯಲಿದೆ ಪೂಜೆ ‘ಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧವಾದ ಸಾಧನೆಗೈದು, ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು. ಅಪ್ಪು ಸದಾ ಅಜರಾಮರ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಅಪ್ಪು ಸಮಾಧಿಗೆ ರಾಜ್ ಕುಟುಂಬ ಆಗಮಿಸಲಿದೆ. ರಾಘವೇಂದ್ರ ರಾಜ್ ಕುಮಾರ್, ವಿನಯ್, ಯುವ ಸಮಾಧಿ ಬಳಿ ಭೇಟಿ ನೀಡಲಿದ್ದಾರೆ. ಈ ವೇಳೆ ಪೂಜೆ ಸಲ್ಲಿಕೆ ಆಗಲಿದೆ