ನಾವು SC, ST ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಲ್ಲದೇ 9ನೇ ಶೆಡ್ಯೂಲ್ನಲ್ಲಿ ಸೇರಿಸಲು ಶಿಫಾರಸು ಸಹ ಮಾಡಿದ್ದೇವೆ. ಈ ಮೂಲಕ SC, ST ಸಮುದಾಯದ ಬೇಡಿಕೆ ಈಡೇರಿಸಿದ್ದೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಾವು ಸಾಮಾಜಿಕ ನ್ಯಾಯ ಕೊಟ್ಟಿದ್ದಕ್ಕೆ ಕಾಂಗ್ರೆಸ್ ವಿರೋಧಿಸ್ತಿದೆ. ಕಾಂಗ್ರೆಸ್ ಎಸ್ಸಿ, ಎಸ್ಟಿ ವಿರೋಧಿ, ಒಕ್ಕಲಿಗರ ವಿರೋಧಿ. ಕಾಂಗ್ರೆಸ್ ಲಿಂಗಾಯತರ ವಿರೋಧಿ ಎಂಬುದು ಗೊತ್ತಾಗುತ್ತದೆ. ಕಾಂಗ್ರೆಸ್ನಿಂದ ಸಾಧ್ಯವಾಗದ್ದನ್ನು ನಾವು ಮಾಡಿ ತೋರಿಸಿದ್ದೇವೆ ಎಂದರು.