ಟಿಕೆಟ್ ಗೊಂದಲದ ನಡುವೆಯೇ ಪ್ರಚಾರಕ್ಕಿಳಿದ ಹೆಚ್ಡಿ ರೇವಣ್ಣ ಹಾಸನ ಜೆಡಿಎಸ್ ಟಿಕೆಟ್ಗಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ಆದ್ರೆ ಬಗೆಹರಿಯದ ಹಾಸನ ಟಿಕೆಟ್ ಗೊಂದಲದ ನಡುವೆಯೇ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಮ್ಮ ಕ್ಷೇತ್ರದಲ್ಲಿ ಇಂದಿನಿಂದ ಪ್ರಚಾರ ಆರಂಭಿಸಲಿದ್ದಾರೆ.
ಹೊಳೆನರಸೀಪುರ ತಾಲ್ಲೂಕಿನ, ಮೂಡಲಹಿಪ್ಪೆ ಗ್ರಾಮದ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಲಿದ್ದಾರೆ.