ವರುಣಾದಲ್ಲಿ ಮೊದಲ ದಿನವೇ ಸೋಮಣ್ಣಗೆ ಬಂಡಾಯದ ಬಿಸಿ: ಬಿಜೆಪಿಗೆ ಗುಡ್ ಬೈ ಹೇಳಿದ ಹಿರಿಯ ಮುಖಂಡ
ಮೈಸೂರು: ವಸತಿ ಸಚಿವ ವಿ. ಸೋಮಣ್ಣ ಇಂದು (ಏ.14) ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಮೊದಲ ದಿನವೇ ಬಂಡಾಯದ ಬಿಸಿ ತಾಗಲಿದೆ.
ಕಳೆದ ಬಾರಿಯ ಚುನಾವಣೆಯಲ್ಲಿ ವರುಣದಿಂದ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿ ತೋಟದಪ್ಪ ಬಸವರಾಜು ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಸೋಮಣ್ಣ ಅವರಿಗೆ ವರುಣಾ ಟಿಕೆಟ್ ನೀಡಿದ ಹಿನ್ನೆಲೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.