ಕೂಗು ನಿಮ್ಮದು ಧ್ವನಿ ನಮ್ಮದು

RCB ಪರ ಕನ್ನಡಿಗ ಪಾದಾರ್ಪಣೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದದ ಮೂಲಕ ಕನ್ನಡಿಗ ವೈಶಾಖ್ ವಿಜಯಕುಮಾರ್ ಐಪಿಎಲ್ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಬಾರಿಯ ಆರ್ಸಿಬಿ ಬಳಗಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕರ್ನಾಟಕ ವೇಗಿ ವೈಶಾಖ್ಗೆ ತವರು ಮೈದಾನದಲ್ಲೇ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ. ಈ ಹಿಂದೆ ಆರ್ಸಿಬಿ ತಂಡದಲ್ಲಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ಕನ್ನಡಿಗನನ್ನು ಆರ್ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿತ್ತು.

ಕರ್ನಾಟಕ ತಂಡದ ಪ್ರಮುಖ ವೇಗ ಬೌಲರ್ ಆಗಿ ಗುರುತಿಸಿಕೊಂಡಿರುವ ವೈಶಾಖ್ 10 ಪ್ರಥಮ ದರ್ಜೆ ಪಂದ್ಯಗಳಿಂದ ಒಟ್ಟು 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ 7 ಲೀಸ್ಟ್ ಎ ಪಂದ್ಯಗಳಿಂದ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ 14 ಟಿ20 ಪಂದ್ಯಗಳಿಂದ 22 ವಿಕೆಟ್ ಪಡೆದಿರುವ 26 ವರ್ಷದ ವೈಶಾಖ್ ಈ ಹಿಂದೆ ಕರ್ನಾಟಕ, ಮಂಗಳೂರು ಯುನೈಟೆಡ್ ಹಾಗೂ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್ನಲ್ಲಿ ವೈಶಾಖ್ ವಿಜಯಕುಮಾರ್ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆರ್ಸಿಬಿ ತಂಡವು ಮೊದಲು ಬ್ಯಾಟ್ ಮಾಡಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್.

error: Content is protected !!