ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಭಾರಿ ಹೊಡೆತ ಬಿದ್ದಂತಾಗಿದೆ.ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಅವರು ಈ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು.
ಹೈಕಮಾಂಡ್ ಶೆಟ್ಟರ್ ಅವರ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಅವರು ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಎಲ್ಲ ಬೆಳವಣಿಗೆಯನ್ನು ದೂರದಿಂದ ಸೂಕ್ಸ್ಮವಾಗಿ ಗಮನಿಸುತ್ತಿದ್ದ ಕಾಂಗ್ರೆಸ್ ಪಕ್ಷವು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ, ಆ ಮೂಲಕ ಜಗದೀಶ್ ಶೆಟ್ಟರ್ ಅವರಿಗಾಗಿಯೇ ಇದನ್ನು ಮೀಸಲಿಟ್ಟ೦ತೆ ತೋರುತ್ತದೆ