ಹುಬ್ಬಳ್ಳಿ: ಇಂದು ಸ್ಪೀಕರ್ ಕಾಗೇರಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಡುವೆ ಎಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸೇರಿ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡುತ್ತೇನೆ. ಸ್ಪೀಕರ್ಗೆ ರಾಜೀನಾಮೆ ನೀಡಿದ ಬಳಿಕ ಹುಬ್ಬಳ್ಳಿಗೆ ವಾಪಸಾಗುತ್ತೇನೆ. ಜೊತೆ್ಗೆ ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದಿದ್ದಾರೆ. ಈವರೆಗೆ ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡುತ್ತೆನೆ ಎಂದರು.
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನ ಎಣಿಕೆ ಶುರುವಾಗಿದೆ. ಈಗಾಗಲೇ ಪ್ರಮುಖ ಮೂರು ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ರಾಜ್ಯ ರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿಯ ಘಟಾನುಘಟಿ ನಾಯಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಇದರ ಬೆನ್ನಲ್ಲೆ ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಸಲ್ಲಿಸೋದಾಗಿ ಘೋಷಿಸಿದ್ದಾರೆ. ಇದರಿಂದ ರಾಜ್ಯ ಬಿಜೆಪಿಗೆ ಬಹಳ ದೊಡ್ಡ ಪೆಟ್ಟು ಬಿದ್ದಿದೆ ಎಂದು ರಾಜಕೀಯ ಪಡಸಾಲೆಯಿಂದ ಮಾತುಗಳು ಕೇಳಿ ಬರುತ್ತಿವೆ.
ಇದರ ಜೊತೆಗೆ ಇಂದು ರಾಹುಲ್ ಗಾಂಧಿ ಕೋಲಾರಕ್ಕೆ ಆಗಮಿಸಲಿದ್ದು ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಇನ್ನು ಜೆಡಿಎಸ್ 2ನೇ ಪಟ್ಟಿಯಲ್ಲಿ ಹಾಸನ ಟಿಕೆಟ್ ಅನ್ನು ಜೆಡಿಎಸ್ ಸ್ಥಳೀಯ ನಾಯಕ ಸ್ವರೂಪ್ ಅವರಿಗೆ ಒಲಿಯುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಹಿಡಿದ ಹಠವನ್ನು ಸಾಧಿಸಿದ್ದಾರೆ. ಜೊತೆಗೆ ಯಡಿಯೂರಪ್ಪ ಸಂಬಂಧಿ ಎನ್ ಆರ್ ಸಂತೋಷ್ಗೆ ಅರಸೀಕೆರೆ ಟಿಕೆಟ್ ಫೈನಲ್ ಆಗಿದೆ. ಇಂದಿನ ಕ್ಷಣ ಕ್ಷಣದ ರಾಜಕೀಯ ಅಪ್ಡೇಟ್ಸ್ ಇಲ್ಲಿದೆ.