ಕೂಗು ನಿಮ್ಮದು ಧ್ವನಿ ನಮ್ಮದು

ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ: ಜಗದೀಶ್ ಶೆಟ್ಟರ್ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಗದೀಶ್ ಶೆಟ್ಟರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಧರ್ಮಸ್ಥಳದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ನನ್ನನ್ನು ಸಂಪರ್ಕ ಮಾಡಿಲ್ಲ. ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಹೆಚ್ಡಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವೇಳೆ ಈ ರೀತಿ ಹೇಳಿದ್ದಾರೆ. ಇದು ಅವರ ಪಕ್ಷದ ಆಂತರಿಕವಾದ ಬೆಳವಣಿಗೆ. ಅವರೊಬ್ಬ ಅನುಭವಸ್ಥ ರಾಜಕಾರಣಿ. ಜಗದೀಶ್ ಶೆಟ್ಟರ್ ಜನಸಂಘದಿಂದಲೂ ಕೆಲಸ ಮಾಡಿದವರು. ಅವರಂತವರೆ ಇಂತಹ ತೀರ್ಮಾನ ಮಾಡಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ನಡೆಯುತ್ತಿರುವ DNA ಬಗ್ಗೆ ಮಾತನಾಡಿದ್ದೆ. ಆ ಡಿಎನ್ಎ ಪ್ರಸ್ತುತವಾಗಿ ಅಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ನನ್ನನ್ನು ಸಂಪರ್ಕ ಮಾಡಿಲ್ಲ. ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ. ಸಣ್ಣವರು ಯಾರಾದರೂ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಯಾಕಂದ್ರೆ ನಮ್ಮದು ಸಣ್ಣ ಪಕ್ಷ. ದೊಡ್ಡ ನಾಯಕರ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಕಾಂಗ್ರೆಸ್ ನವರು ಮಾತುಕತೆ ನಡೆಸಿದ್ರೆ ಅದು ಅವರಿಗೆ ಸೇರಿದ್ದು ನನಗೆ ಸಂಬಂಧ ಇಲ್ಲ ಎಂದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್? ಬೆಂಗಳೂರಿಗೆ ಕರೆತರಲು ಡಿಕೆ ಶಿವಕುಮಾರ್ ಆಪ್ತನ ಹೆಸರಲ್ಲಿ 2 ಹೆಲಿಕಾಪ್ಟರ್ ಬುಕ್ ಬೆಂಗಳೂರು/ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ ಕೇಂದ್ರ ಟಿಕೆಟ್ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದು, ಇಂದು ಬಿಜೆಪಿಯ(BJP) ಎಲ್ಲಾ ಸ್ಥಾನಮಾನಗಳಿಗೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇನ್ನೊಂದೆಡೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ? ಸ್ವಾತಂತ್ರ ಅಭ್ಯರ್ಥಿ ಆಗ್ತಾರೋ ಅಥವಾ ಕಾಂಗ್ರೆಸ್ ಸೇರುತ್ತಾರೋ? ಎನ್ನುವ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ನಡೆದಿವೆ. ಈ ಹಿನ್ನೆಲೆಯಲ್ಲಿ ಶೆಟ್ಟರ್ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆ. ಕಾಂಗ್ರೆಸ್ಗೆ ಬರುವಂತೆ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ನ ಪ್ರಮುಖ ನಾಯಕರು ಆಹ್ವಾನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ

error: Content is protected !!