ಬೆಂಗಳೂರು: ಜಗದೀಶ್ ಶೆಟ್ಟರ್ ಅವರು ಜನಸಂಘದ ಕಾಲದಿಂದಲೂ ಬಿಜೆಪಿಯಲ್ಲಿದ್ದರು. ಜಗದೀಶ್ ಶೆಟ್ಟರ್ರನ್ನು ಶಾಸಕ, ಮಂತ್ರಿ, ಸಿಎಂ ಮಾಡಿದ್ದೆವು. ಜಗದೀಶ್ ಶೆಟ್ಟರ್ ಅವರಿಗೆ ನಾನು, ಅನಂತಕುಮಾರ್ ಕಾವಲಾಗಿದ್ದೆವು. ನನ್ನ ಜತೆ ಹೆಜ್ಜೆ ಹಾಕುವ ಜವಾಬ್ದಾರಿ ಜಗದೀಶ್ ಶೆಟ್ಟರ್ಗೆ ಇತ್ತು. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ.
ಇಂಥ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ, ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಸ್ಥಾನಮಾನ ಸಿಗಲಿ ಸಿಗದಿರಲಿ. ದೇಶಕ್ಕಾಗಿ ಕೆಲಸ ಮಾಡಬೇಕಿರೋದು ನಾವು ನಡೆದುಕೊಂಡು ಬಂದ ದಾರಿ. ಪಕ್ಷದ ಸಹಕಾರ ಇಲ್ಲದಿದ್ದರೇ ವ್ಯಕ್ತಿ ಎತ್ತರಕ್ಕೆ ಬೆಳೆಯಲ್ಲ. ಪಕ್ಷದ ಸಹಕಾರ ಇಲ್ಲದಿದ್ರೆ ವ್ಯಕ್ತಿ ಸಿಎಂ ಆಗಲಾರ ಎಂದು ಬಿಎಸ್. ಯಡಿಯೂರಪ್ಪ ಅವರು ಹೇಳಿದರು.