ಕೂಗು ನಿಮ್ಮದು ಧ್ವನಿ ನಮ್ಮದು

ಬಿಜೆಪಿ ಹಿರಿಯ ನಾಯಕನಾಗಿ ನನಗೆ ಗೌರವ ಕೊಡಲಿಲ್ಲ: ಜಗದೀಶ್ ಶೆಟ್ಟರ್

ಬೆಂಗಳೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರ್ತಾ ಇದ್ದೇನೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಹಳ ಜನರಿಗೆ ಅಶ್ಚರ್ಯ ಆಗಿದೆ. ಯಾಕೆ ಕಾಂಗ್ರೆಸ್ ಸೇರ್ತಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಹಲವಾರು ತಿಂಗಳ ಹಿಂದೆ ಹಿರಿಯ ನಾಯಕನಾಗಿ ನನಗೆ ಏನು ವೇದನೆ ಆಗಿದೆ ಅದು ಯಾರ ಗಮನಕ್ಕೂ ಬರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಾನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ದಿವಂಗತ ಮಾನಿ ಸಂಸದ ಅನಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ಎಲ್ಲ ರೀತಿ ಗೌರವ ಸ್ಥಾನಮಾನ ನೀಡಿದೆ. ಅದಕ್ಕೆ ಪ್ರತಿಯಾಗಿ ನಾನೂ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಆದರೆ ಆರು ಬಾರಿ 1994 ರಿಂದ ಸ್ಪರ್ಧೆ ಮಾಡಿದ್ದೇನೆ. ಇದು ಏಳನೇ ಬಾರಿ ನಾನು ಸ್ಪರ್ಧೆ ಮಾಡಬೇಕಾಗಿದೆ. ಸಹಜವಾಗಿ ಟಿಕೇಟ್ ಇಲ್ಲ ಅಂದಾಗ ಆಘಾತ ಆಯ್ತು ವೇದನೆ ಆಯ್ತು. ಹಿರಿಯ ನಾಯಕನಾಗಿ ನನಗೆ ಗೌರವ ಕೊಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ

error: Content is protected !!