ಕೂಗು ನಿಮ್ಮದು ಧ್ವನಿ ನಮ್ಮದು

ಬಿಜೆಪಿಗೆ ಸೂರ್ಯಕಾಂತ ನಾಗಮಾರಪಳ್ಳಿ ರಾಜೀನಾಮೆ

ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸೂರ್ಯಕಾಂತ ನಾಗಮಾರಪಳ್ಳಿ ರಾಜೀನಾಮೆ ನೀಡಿದ್ದಾರೆ. ಬೀದರ್ ಉತ್ತರ ವಿಧಾನ ಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸೂರ್ಯಕಾಂತದ ಬದಲು ಈಶ್ವರ ಸಿಂಗ್ ಠಾಕೂರ್ ಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಅಪ್ಪಟ ಹಿಂದುತ್ವವಾಧಿ ಈಶ್ವರ ಸಿಂಗ್ ಠಾಕೂರ್ ಗೆ ಟಿಕೇಟ್ ಕೊಟ್ಟಿದ್ದು ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ನಿಂದ ಸ್ಪರ್ಧಿಸಲು ಸೂರ್ಯಕಾಂತ ನಿರ್ಧಾರ ಮಾಡಿದ್ದಾರೆ.

ಸೂರ್ಯಕಾಂತ ನಾಗಮಾರಪಳ್ಳಿ ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಳ್ಳಿ ಸುಪುತ್ರ. ಕಳೆದ ಭಾರಿ ಬಿಜೆಪಿಯಿಂದ ಸ್ಪರ್ಧೆ ಮಾಡಿ 63 ಸಾವಿರ ಮತಗಳನ್ನ ಪಡೆದು ಸೋತಿದ್ದರು.

error: Content is protected !!