ಕೂಗು ನಿಮ್ಮದು ಧ್ವನಿ ನಮ್ಮದು

ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ದುರದೃಷ್ಟಕರ: ಸಿಟಿ ರವಿ

ಚಿಕ್ಕಮಗಳೂರು: ಬಿಜೆಪಿ ತೊರೆದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮಾತನಾಡಿ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರಿದ್ದು ದುರದೃಷ್ಟಕರ ಎಂದು ಹೇಳಿದ್ದಾರೆ. ಒಬ್ಬ ವ್ಯಕ್ತಿಗೆ ಒಂದು ಪಕ್ಷ ಏನಿಲ್ಲ ಸ್ಥಾನ ನೀಡಬಹುದು ಅದನ್ನೆಲ್ಲ ಕೊಟ್ಟಿದೆ. ಜಗದೀಶ್ ಶೆಟ್ಟರ್ ಪಕ್ಷ ತೊರೆದು ಯಾವ ಮೆಸೇಜ್ ನೀಡಿದರು.

ಸೈದ್ಧಂತಿಕವಾಗಿ ಬಿಜೆಪಿ ಜೊತೆ ಶೆಟ್ಟರ್ ಇರಲಿಲ್ಲವಾ ? ವೈಯಕ್ತಿಕ ಲಾಭ ನಷ್ಟವನ್ನು ಹಾಕಿ‌ ನನಗೆ ಲಾಭ ಆದರೆ ಮಾತ್ರ ಬಿಜೆಪಿ. ಇನ್ನೊಬ್ಬರಿಗೆ ಅಂದ್ರೆ ಬಿಜೆಪಿ ಅಲ್ಲ ಎಂಬ ಮನಸ್ಥಿತಿ ಆಶ್ಚರ್ಯ ತರಿಸಿದೆ. ಜಗದೀಶ್ ಶೆಟ್ಟರ್ ಅವರಿಂದ ಇಂತಹದನ್ನ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.

error: Content is protected !!