ಬೆಳಗಾವಿ: ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರದಲ್ಲಿ ಗೊಂದಲವಿದ್ದು, ಇವತ್ತು ಮುಂಜಾನೆ 10ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಚುನಾವಣಾಧಿಕಾರಿ ಡಾ.ರಾಜೀವ್ ಕೂಲೇರ್ ಅವರು ನೋಟಿಸ್ ನೀಡಿದ್ದಾರೆ.
ರತ್ನಾ ಮಾಮನಿ ಅವರು ಅಫಿಡೆವಿಟ್ ಸಲ್ಲಿಕೆ ವೇಳೆ ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘಸಿದ್ದಾರೆಂದು ಸವದತ್ತಿ ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಾಪುಗೌಡ ಪಾಟೀಲ್ ನಿನ್ನೆ ನಾಮಪತ್ರ ಪರಿಶೀಲನೆ ವೇಳೆ ಆಕ್ಷೇಪಣೆ ವ್ಯಕ್ತಪಡಿಸಿದ್ದರು.