ಕೂಗು ನಿಮ್ಮದು ಧ್ವನಿ ನಮ್ಮದು

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್ಟಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಬಸ್ ಪಾಸ ಅವಧಿಯನ್ನು ವಿಸ್ತರಿಸಿದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ್ ಮತ್ತು ವಿವಿಧ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಕೆಎಸ್ಆರ್ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಮಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡ ತಿಂಗಳ ಅವಧಿಗೆ ಬಸ್ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಎಲ್ಲಾ ಚಾಲಕ-ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್ಆರ್ಟಿಸಿ ಮುಖ್ಯ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.


ಏಪ್ರಿಲ್‌ನಲ್ಲಿ ಬಸ್ ಪಾಸ್ ಅವಧಿ ಮುಗಿಯಲಿದೆ. ಆದ್ರೆ, ಕೆಲ ಕೋರ್ಸ್ಗಳ ಪರೀಕ್ಷೆಗಳು ಇರುವುದರಿಂದ ಪಾಸ್ ಅವಧಿ ವಿಸ್ತರಣೆಗೆ ವಿದ್ಯಾರ್ಥಿಗಳು ಮನವಿ ಮಾಡಿವೆ. ಅದಂತೆ ವಿವಿಧ ಕೋರ್ಸ್‌ಗಳ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಿ ಬಸ್ ಪಾಸ್ ಒಂದು ಅಥವಾ ಎರಡು ತಿಂಗಳು ವಿಸ್ತರಿಸುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ. ಇನ್ನು ವಿದ್ಯಾರ್ಥಿಗಳು ನಿಯಮಾನುಸಾರವಾಗಿ ಹಣ ಪಾವತಿಸಿ ರಶೀದಿ ಪಡೆದುಕೊಂಡು ಪ್ರಯಾಣ ಮಾಡಬಹುದಾಗಿದೆ.

ವಿದ್ಯಾರ್ಥಿ ಬಸ್ ಪಾಸ್ ಅವಧಿಯು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಆದರೆ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನೂ ನಡೆಯುತ್ತಿದ್ದು, ಪರೀಕ್ಷೆಗಳೂ ಹತ್ತಿರದಲ್ಲೇ ಇದೆ. ಈ ನಡುವೆ ನಿಗಮವು ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದು ವಿದ್ಯಾರ್ಥಿಗಳಿಗೆ ಅನಕೂಲವಾದಂತಾಗಿದೆ

error: Content is protected !!