ಕೂಗು ನಿಮ್ಮದು ಧ್ವನಿ ನಮ್ಮದು

ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಮತ್ತೊಮ್ಮೆ ಅವಕಾಶ ನೀಡಿ: ಸಚಿವೆ ಶಶಿಕಲಾ ಜೊಲ್ಲೆ

ನಿಪ್ಪಾಣಿ: ಕ್ಷೇತ್ರದ ಸಮುದಾಯದೊಂದಿಗೆ ಸದಾ ಇರುತ್ತೇನೆ. ಕಳೆದ ಚುನಾವಣೆಯಲ್ಲಿ ಬೆಂಬಲಿಸಿ ಹೆಚ್ಚಿನ ಮತದೊಂದಿಗೆ ಗೆಲ್ಲಿಸಿದ್ದೀರಿ. ಅದೇ ರೀತಿ ಈ ಬಾರಿಯೂ ಹೆಚ್ಚಿನ ಮತದೊಂದಿಗೆ ಬೆಂಬಲ ನೀಡಿ ಎಂದು ಸ್ಥಳೀಯ ಸಚಿವೆ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದರು.

ಇಂದು ಬಿರುಬಿಸಿಲಿನ ನಡುವೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಕೋಗನೋಳಿ, ಯಮಗರ್ನಿ, ಬೂದಿಹಾಳ, ಹಾಗೂ ಗಾಯಕನವಾಡಿ ಗ್ರಾಮಗಳಲ್ಲಿ ಬಿರುಸಿನ ಮತಯಾಚನೆ ಮಾಡಿದರು. ತಮ್ಮ ಮತ ಪತ್ರಿಕೆ ನಮೂನೆಯನ್ನು ನೀಡಿ ಮಾತನಾಡಿದ ಅವರು, ಕಳೆದ 10 ವರ್ಷದಲ್ಲಿ ಕೋಗನೋಳಿ ಗ್ರಾಮದಲ್ಲಿ 56 ಕೋಟಿ ಅಧಿಕ ಕಾಮಗಾರಿ ಯಮಗರ್ಣಿ 17 ಕೋಟಿ ಅಧಿಕ, ಬೂದಿಹಾಳ ಗ್ರಾಮದಲ್ಲಿ 15 ಕೋಟಿ ಅಧಿಕ ಗಾಯಕನವಾಡಿ 8 ಕೋಟಿ ಅಧಿಕ ಅಭಿವೃದ್ದಿಯ ಕಾಮಗಾರಿಗಳನ್ನು ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಗ್ರಾಮದಲ್ಲಿ ರಸ್ತೆ, ಚರಂಡಿ, ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ, ಅಂಗನವಾಡಿ, ದೇವಸ್ಥಾನ ಜೀರ್ಣೋದ್ದಾರ ಹೀಗೆ ಹಲವಾರು ಕಾಮಗಾರಿ ಕೈಗೊಂಡಿದ್ದೇನೆ. ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ. ಕ್ಷೇತ್ರದ ಮತ್ತಷ್ಟು ಅಭಿವೃದ್ದಿಗೆ ಮತ್ತೊಮ್ಮೆ ಅವಕಾಶ ನೀಡಿ ಎಂದು ಮನವಿ ಮಾಡಿದರು.

ಕ್ಷೇತ್ರದ ಬಿಜೆಪಿ ಪ್ರಮುಖರು ಮತ್ತು ನೂರಾರು ಮಹಿಳೆಯರು ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಅವರಿಗೆ ಸಾಥ್‌ ನೀಡಿದರು.

error: Content is protected !!