ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಸಂಬಂಧ ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇನ್ನು ಮತ್ತೊಂದೆಡೆ ಒಂದು ಹೆಜ್ಜೆ ಮುಂದಿಟ್ಟ ಬಿಜೆಪಿ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟಿಸ್ ನೀಡಿದೆ. ಸೋಮವಾರದೊಳಗೆ ಜಾಹೀರಾತು ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕರಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೇಶವಪ್ರಸಾದ್ರಿಂದ ಲೀಗಲ್ ನೋಟಿಸ್ ನೀಡಲಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿತ್ತು. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ತಾಕೀತು ಮಾಡಿತ್ತು. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು. ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ.
ರೇಟ್ ಕಾರ್ಡ್ ನೀಡಿದ್ದು ಯತ್ನಾಳ್, ಗೂಳಿಹಟ್ಟಿ ಶೇಖರ್, ಹೆಚ್.ವಿಶ್ವನಾಥ್ ಎಂದು ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದರು. ಸಿಎಂ ಸ್ಥಾನಕ್ಕೆ ರೇಟ್ ಎಷ್ಟು ಎಂಬುವುದನ್ನು ಬಿಜೆಪಿಯವರೇ ಹೇಳಿದ್ದಾರೆ. ಮಂತ್ರಿ ಸ್ಥಾನಕ್ಕೆ ಎಷ್ಟು ರೇಟ್, ಮಠಗಳ ಸ್ವಾಮೀಜಿಗಳಿಂದ ಎಷ್ಟು ರೇಟ್. ಈ ರೇಟ್ ಕಾರ್ಡ್ ನೀಡಿದ್ದು ಬಿಜೆಪಿಯವರೇ. ಬಿಜೆಪಿಯವರೇ ನೀಡಿದ ರೇಟ್ ಕಾರ್ಡ್ನ್ನು ನಾವು ನೀಡಿದ್ದೇವೆ ಅಷ್ಟೇ ಎಂದಿದ್ದರು. ಸದ್ಯ ಈಗ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟಿಸ್ ನೀಡಿದೆ. ಸೋಮವಾರದೊಳಗೆ ಜಾಹೀರಾತು ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲವಾದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್ ಕಳಿಸಲಾಗಿದೆ.
ಕಾಂಗ್ರೆಸ್ ಪಕ್ಷ ದಿನ ಪತ್ರಿಕೆಗಳಲ್ಲಿ ಮೇ.5 ರಂದು ಭ್ರಷ್ಟಾಚಾರ ಆರೋಪಗಳಿರುವ ಆಧಾರರಹಿತ ಜಾಹಿರಾತು ನೀಡಿತ್ತು. ಈ ಸಂಬಂಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ದೂರು ಪರಿಶೀಲಿಸಿದ ಚುನಾವಣಾ ಆಯೋಗ ಆರೋಪಗಳ ಬಗ್ಗೆ ನೈಜ ಸಾಕ್ಷ್ಯ ಒದಗಿಸಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಸೂಚನೆ ನೀಡಿತ್ತು. ಮೇ .7 ರ ಸಂಜೆ 7 ಗಂಟೆಯೊಳಗೆ ವಿವರಣೆ ಒದಗಿಸಲು ತಾಕೀತು ಮಾಡಿತ್ತು. ಸರ್ಕಾರದ ನೀತಿಯ ಬಗ್ಗೆ ಟೀಕಿಸುವ ಹಕ್ಕಿದೆ. ಆದರೆ ಜಾಹಿರಾತಿನಲ್ಲಿರುವುದು ಸಾಧಾರಣ ಆರೋಪಗಳಲ್ಲ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿರ್ದಿಷ್ಟವಾಗಿ ಭ್ರಷ್ಟಾಚಾರದ ಆರೋಪಿಸಲಾಗಿದೆ.
ಇದು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರುವಂತದ್ದಾಗಿದೆ. ಜಾಹಿರಾತು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಬಳಿ ಪುರಾವೆಗಳಿರಬೇಕು. ಹೀಗಾಗಿ ಸಂಜೆ 7 ಗಂಟೆಯೊಳಗೆ ಪುರಾವೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು.