ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದೆ. ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಸಮಾವೇಶ, ರೋಡ್ ಶೋ ನಡೆಸಿದರು. ಇಂದು (ಮೇ.08) ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಹಿನ್ನೆಲೆ ಸಂಜೆ 5ರ ಬಳಿಕ ಸಭೆ, ಸಮಾರಂಭ, ಉತ್ಸವ, ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಕ್ಷೇತ್ರದಲ್ಲಿ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬರುವಂತಿಲ್ಲ. ಆದರೆ ಮನೆ ಮನೆಗೆ ತೆರಳಿ ಅಭ್ಯರ್ಥಿ ಸೇರಿ 6 ಜನರು ಮಾತ್ರ ಪ್ರಚಾರ ಮಾಡಲು ಅವಕಾಶವಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದೆ. ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಸಮಾವೇಶ, ರೋಡ್ ಶೋ ನಡೆಸಿದರು. ಮತಾದನಾಕ್ಕೆ ಇನ್ನು 2 ದಿನ ಬಾಕಿ ಉಳಿದಿದ್ದು ಮೇ.10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಇಂದು ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇನ್ನು ಎಲ್ಲಾ ಪಕ್ಷಗಳ ನಾಯಕರು ಕೊನೆ ಹಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಅಲ್ಲದೇ ಅಭ್ಯರ್ಥಿ ಹೊರತುಪಡಿಸಿ ಸ್ಟಾರ್ ಪ್ರಚಾರಕರು ಕ್ಷೇತ್ರದಿಂದ ಹೊರ ನಡೆಯಲಿದ್ದಾರೆ.