ಕೂಗು ನಿಮ್ಮದು ಧ್ವನಿ ನಮ್ಮದು

ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ ಬಿ.ಎಸ್ ಯಡಿಯೂರಪ್ಪ..!

ಬಿ.ಎಸ್ ಯಡಿಯೂರಪ್ಪ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ. ಬಿ. ಎಸ್ ವೈ, ಬಿ.ವೈ ವಿಜಯೇಂದ, ಬಿ.ವೈ. ರಾಘವೇಂದ್ರ ಸೇರಿದಂತೆ ಕುಟುಂಬ ಸಮೇತರಾಗಿ ಮತ ಚಲಾವಣೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿನ ಶಿಕಾರಿಪುರದ ಆಡಳಿತ ಸೌಧದಲ್ಲಿ ಮತದಾನ ನಡೆದಿದೆ. ಮತಗಟ್ಟೆಗೆ ಹೋಗುವ ಮುನ್ನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಿ.ಎಸ್ ಯಡಿಯೂರಪ್ಪ ಮತದಾನದ ನಂತರ ಮಾದ್ಯಮದ ಜೊತೆ ಮಾತನಾಡಿದ ಅವರು ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಸ್ಥಾನವನ್ನು ವಿಜಯೇಂದ್ರ ಅವರು ತುಂಬಲಿದ್ದಾರೆ ಎಂದಿದ್ದಾರೆ.

ಜೊತೆಗೆ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಾವು ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಪ್ರಧಾನಿ ಕುಯರಿತು ಮಾತನಾಡಿದ್ದಾರೆ.

error: Content is protected !!