ಕೂಗು ನಿಮ್ಮದು ಧ್ವನಿ ನಮ್ಮದು

ಹೆಚ್ಚಾದ ಆನೆ ಹಾವಳಿ; ಕೋಲಾರ, ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ

ಕೋಲಾರ: ನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ತಾಲೂಕಿನ ಮಲ್ಲನೂರು ಗ್ರಾಮದಲ್ಲಿ ನಡೆದಿದೆ. ಆನೆ ಹಾವಳಿಗೆ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪತಿಚೇನು ಗ್ರಾಮದ ಮಹಿಳೆ ಹಾಗೂ ಮಲ್ಲನೂರು ಪಂಚಾಯಿತಿಯ ಸಪ್ಪನಿಕುಂಟಾ ಗ್ರಾಮದ ಶಿವಲಿಂಗಂ ಎಂಬುವ ವ್ಯಕ್ತಿ ಆನೆ ದಾಳಿಗೆ ಬಲಿಯಾಗಿದ್ದಾರೆ.

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮಲ್ಲನೂರು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಎರಡು ರಾಜ್ಯಗಳ ಗಡಿ ಗ್ರಾಮಗಳಲ್ಲಿ ಆನೆ ಹಾವಳಿಯಿಂದಾಗಿ ಗ್ರಾಮಸ್ಥರು ಮನೆಯಿಂದ ಆಚೆ ಬರಲು ಕೂಡ ಆತಂಕ ಪಡುವಂತಾಗಿದೆ.

ಡಿವೈಡರ್ಗೆ ಕಾರು ಡಿಕ್ಕಿ, 5 ವರ್ಷದ ಮಗು ಸ್ಥಳದಲ್ಲೇ ಸಾವು
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಬಳಿ ಚಾಲನಕ ನಿತಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದ್ದು 5 ವರ್ಷದ ಸೃಜನ್ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾಗಿನೆಲೆಯಲ್ಲಿ ನಡೆದ ಮದುವೆಗೆ ಹೋಗಿ ಹಿಂದಿರುಗುವಾಗ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಮಲಗಿದ್ದ ಮಗು ಮೃತಪಟ್ಟಿದ್ದು ಸೃಜನ್ ತಂದೆಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆ
ಶಿವಮೊಗ್ಗ ತಾಲೂಕಿನ ಕುಂಸಿ ಬಳಿ 2 ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮಹೇಶಪ್ಪ(65) ಎಂಬುವವರು ಮೃತಪಟ್ಟಿದ್ದಾರೆ. ಮೃತ ಮಹೇಶಪ್ಪ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ನಿವಾಸಿ. 2 ಬಸ್‌ಗಳ ನಡುವೆ ಡಿಕ್ಕಿಯಾಗಿ ನಿನ್ನೆ ಇಬ್ಬರು ಮೃತಪಟ್ಟಿದ್ದರು. ನಿನ್ನೆ ಅರುಣ್ ಕುಮಾರ್(48), ತಿಪ್ಪೇಸ್ವಾಮಿ(46) ಮೃತಪಟ್ಟಿದ್ದರು. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

error: Content is protected !!