ಕೂಗು ನಿಮ್ಮದು ಧ್ವನಿ ನಮ್ಮದು

ನಾಳೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಯಾರ್ಯಾರು ಬರುತ್ತಾರೆ ಗೊತ್ತೇ?

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಆರಂಭವಾಗಲಿರುವ ಸಮಾರಂಭದಲ್ಲಿ ಕೆಲ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೇ 10 ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದೆ.ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಾನ ಮನಸ್ಕ ಪಕ್ಷಗಳ ಮುಖಂಡರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ.ವಿರೋಧ ಪಕ್ಷಗಳ ಉನ್ನತ ನಾಯಕರಿಗೆ ಆಹ್ವಾನ ಕಳುಹಿಸುವ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟಿನ ಕುರಿತು ಬಿಜೆಪಿಗೆ ಸಂದೇಶ ನೀಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಫಾರೂಕ್ ಅಬ್ದುಲ್ಲಾ- ಜಮ್ಮು ಕಾಶ್ಮೀರ ಮಾಜಿ ಸಿಎಂ

ಮೆಹಬೂಬ ಮುಕ್ತಿ- ಜಮ್ಮು ಕಾಶ್ಮೀರ ಮಾಜಿ ಸಿಎಂ

ಸೀತಾರಾಂ ಯೆಚೂರಿ- ಸಿಪಿಎಂ ನಾಯಕ

ಡಿ.ರಾಜಾ- ಸಿಪಿಐ ನಾಯಕ

ಲಲನ್ ಸಿಂಗ್- ಜೆಡಿಯು ನಾಯಕ

ವೈಕೋ- ತಮಿಳುನಾಡು ಎಂಡಿಎಂಕೆ ಪಾರ್ಟಿ

ಎಂ.ಕೆ.ಪ್ರೇಮಚಂದ್ರನ್- ಆರ್ ಎಸ್ ಪಿ ಪಾರ್ಟಿ

ದೀಪಾಂಕರ್ ಭಟ್ಟಾಚಾರ್ಯ- ಸಿಪಿಐಎಂ

ತಿರುಮಾವಲನ್- ವಿಸಿಕೆ ಪಾರ್ಟಿ

ಜಯಂತ್ ಚೌದರಿ- ಆರ್ ಎಲ್ ಡಿ ನಾಯಕ

ಬಿಹಾರ ಸಿಎಂ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿತರಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಜೆ & ಕೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಒಡಿಶಾ ಸಿಎಂ ನವೀನ್ ಪಟ್ನಾಯಕ್ , ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಮತ್ತು ಇತರರನ್ನು ಮೇ 20 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಗಾಂಧಿ ಕುಟುಂಬದ ಸದಸ್ಯರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಮಾಚಲದ ಸುಖವಿಂದರ್ ಸಿಂಗ್ ಸುಖು, ರಾಜಸ್ತಾನದ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢದ ಭೂಪೇಶ್ ಬಾಘೇಲ್ ಅವರಂತಹ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳು ಸಹ ಇರಲಿದ್ದಾರೆ.

ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಹ್ವಾನಿಸದಿರುವ ಕಾಂಗ್ರೆಸ್ ಅನ್ನು ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಶುಕ್ರವಾರ ಟೀಕಿಸಿದ್ದು, ಈ ಕ್ರಮವು ಹಳೆಯ ಪಕ್ಷದ ಅಪಕ್ವ ರಾಜಕೀಯ ಮತ್ತು ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಹೇಳಿದೆ.ಬಿಜೆಪಿಯ ಫ್ಯಾಸಿಸ್ಟ್ ರಾಜಕೀಯದ ವಿರುದ್ಧ ದೇಶದ ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒಗ್ಗೂಡಿಸುವ ಧ್ಯೇಯವನ್ನು ಕಾಂಗ್ರೆಸ್‌ನ ಈ ಕ್ರಮವು ಸಾಧಿಸಲು ಸಾಧ್ಯವಿಲ್ಲ ಎಂದು ಸಾಬೀತುಪಡಿಸಿದೆ ಎಂದು ಎಲ್‌ಡಿಎಫ್ ಸಂಚಾಲಕ ಇ ಪಿ ಜಯರಾಜನ್ ಹೇಳಿದ್ದಾರೆ.

error: Content is protected !!