ಕೂಗು ನಿಮ್ಮದು ಧ್ವನಿ ನಮ್ಮದು

ವೇದಿಕೆ ಮೇಲೆ ರಾಹುಲ್ ಗಾಂಧಿ ಅಬ್ಬರದ ಭಾಷಣ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಬ್ಬರದ ಭಾಷಣ ಮಾಡಿದ್ದಾರೆ. ಕರ್ನಾಟಕದ ಜನರಿಗೆ ನನ್ನ ಮನಃಪೂರ್ವಕವಾಗಿ ಅಭಿನಂದನೆಗಳು. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಕ್ಕೆ ಅಭಿನಂದನೆಗಳು. ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು, ಎಲ್ಲವನ್ನೂ ಈಡೇರಿಸುತ್ತೇವೆ.

ಕೆಲವೇ ಹೊತ್ತಿನಲ್ಲಿ ನೂತನ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಗ್ಯಾರಂಟಿಗಳು ಅನುಮೋದನೆ ಆಗಲಿದೆ. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದರು.

error: Content is protected !!