ಕಲಬುರಗಿ: ಇಂತಹ ಘಟನೆ ಇದೆ ಮೊದಲಲ್ಲ, ಇದೇ ತಿಂಗಳ ಮೇ.5 ರಂದು ಕಾನ್ಸ್ಟೇಬಲ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಕಾನಸ್ಟೇಬಲ್ಲೊಬ್ಬ ತನ್ನ ಸರ್ವಿಸ್ 303 ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು.
ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದರು. ಚುನಾವಣೆ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ, ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂಲತಃ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಕೆಲ ವರ್ಷಗಳಿಂದ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದ್ರೆ, ಇದೀಗ ಏಕಾಎಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.