ಮಂಡ್ಯ: ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಂಡವಪುರ ತಾಲೂಕಿನ ಟಿ.ಎಸ್ ಛತ್ರದ ಗ್ರಾಮದ ನಿವಾಸಿ ರಾಜು ಮೃತ ಕಾರ್ಮಿಕ.
ಮಾವಿನಕಾಯಿ ಕೀಳಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ನಡೆದಿದ್ದು, ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ