ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಬೆಳ್ಳೂರು, ಮಂಚಿಕೆರೆ, ಕ್ಯಾಸಲ್ ರಾಕ್, ಅಣ್ಣಿಗೆರೆ, ಕುಂದಗೋಳ, ಕಿರವತ್ತಿ, ಅಂಕೋಲಾ, ಬೆಳಗಾವಿ ವಿಮಾನ ನಿಲ್ದಾಣ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಸಕಲೇಶಪುರ, ಗೋಪಾಲ್ನಗರ, ಬನವಾಸಿ, ಮದ್ದೂರು, ಉತ್ತರಹಳ್ಳಿ, ಹಳಿಯಾಳ, ಕುಮಟಾ, ಮಹಾಲಿಂಗಪುರ, ರಬಕವಿ, ಕೃಷ್ಣರಾಜಪೇಟೆ, ಶಿಡ್ಲಘಟ್ಟ, ನಿಪ್ಪಾಣಿ, ಚಿಕ್ಕಬಳ್ಳಾಪುರ, ಕುಣಿಗಲ್ನಲ್ಲಿ ಮಳೆಯಾಗಿದೆ.
ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರಾಖಂಡದ ಜ್ವಾಲಾಪುರ ಪ್ರದೇಶದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹವಾಮಾನ ವೈಪರೀತ್ಯದಿಂದ 200 ವರ್ಷ ಹಳೆಯ ಮರವೊಂದು ಉರುಳಿಬಿದ್ದಿದೆ. ಏಕಾಏಕಿ ಬೃಹತ್ ಮರ ಉರುಳಿಬಿದ್ದಿದ್ದು ಅನೇಕರು ಸಿಲುಕಿದ್ದರು.