ಒಳಮೀಸಲಾತಿಯಿಂದಲೇ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ ಎಂದು ಆತ್ಮಾವಲೋಕನ ಸಭೆಯಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಭಾವುಕರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು.
72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ ರಾಜ್ಯಕ್ಕಲ್ಲ. ಬೆಲೆ ಏರಿಕೆ ಸಂದರ್ಭದಲ್ಲಿ ಅಕ್ಕಿ ಕಡಿತ ಮಾಡಿದ್ದು ತಪ್ಪು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಕೆಲಸ ಮಾಡಿದೆ ಎಂದಿದ್ದಾರೆ.