ಬೆಂಗಳೂರು: ಬೆಳಗ್ಗೆ 10 ಗಂಟೆಗೆ ಸಭೆಯಿದೆ, ಅದರಲ್ಲಿ ಎಲ್ಲವೂ ಬಗೆಹರಿಯಲಿದೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸುಸೂತ್ರವಾಗಿ ನಡೆಯಲಿದೆ ಎಂದು ದೆಹಲಿಯಲ್ಲಿ ಟಿವಿ9ಗೆ ನೂತನ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ. ಪ್ರಾದೇಶಿಕವಾರು, ಸಮುದಾಯವಾರು ಪ್ರಾತಿನಿಧ್ಯ ದೊರೆಯಬೇಕು.
ಸಿಎಂ, ಡಿಸಿಎಂ, ಎಐಸಿಸಿ ಅಧ್ಯಕ್ಷರು ಚರ್ಚಿಸಿ ಫೈನಲ್ ಮಾಡ್ತಾರೆ. ಯಾವುದೇ ಸಮಸ್ಯೆಯಿಲ್ಲದೆ ಸಂಪುಟ ವಿಸ್ತರಣೆಯಾಗಲಿದೆ ಎಂದರು.