ಕೂಗು ನಿಮ್ಮದು ಧ್ವನಿ ನಮ್ಮದು

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.4ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸುವ ಸೂಚನೆ ಹಿನ್ನೆಲೆ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ

error: Content is protected !!