ದುರಂತ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಕೇಂದ್ರ ಸರ್ಕಾರ ನೊಂದವರ ಜೊತೆ ಇದೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ. ದುರಂತ ಪಾಠ ಕಲಿಸಿದೆ, ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸ್ತೇವೆ.
ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸುತ್ತೇವೆ. ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಹೇಳಿದ್ದಾರೆ.