ಕೂಗು ನಿಮ್ಮದು ಧ್ವನಿ ನಮ್ಮದು

ಕೊನೆಗೂ ʼಮುಖ್ಯಮಂತ್ರಿʼ ಸ್ಥಾನ ತ್ಯಾಗದ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿಕೆಶಿ..! ಏನದು.?

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿ ಉಪಮುಖ್ಯಮಂತ್ರಿ ಸ್ಥಾನ ಸ್ವೀಕರಿಸಿರುವ ಸುದ್ದಿ ಎಲ್ಲರಿಗೂ ತಿಳಿದಿದೆ. ಇದೀಗ ತಮ್ಮ ಸ್ಥಾನ ತ್ಯಾಗದ ಹಿನ್ನೆಲೆ ಕುರಿತು ಮಾತನಾಡಿರುವ ಅವರು, ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆಯಂತೆ ನಾನು ತಾಳ್ಮೆಯಿಂದ ಉಳಿಯಲು ನಿರ್ಧರಿಸಿದೆ ಎಂದು ಹೇಳಿಕೆ ನೀಡಿದ್ದಾರೆ.

ಉಪಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಡಿಕೆಶಿ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಮತದಾರರಿಗೆ ತಮ್ಮನ್ನು ಮುಖ್ಯಮಂತ್ರಿಯಾಗಿ ನೋಡುವ ಆಸೆ ಎಂದಿಗೂ ಸುಳ್ಳಾಗುವುದಿಲ್ಲ, ಆದರೆ ತಾಳ್ಮೆಯಿಂದ ಕಾಯುವಂತೆ ಹೇಳಿದರು. ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನೀವು ನನಗೆ ಹೆಚ್ಚಿನ ಸಂಖ್ಯೆಯಲ್ಲಿ ಮತಗಳನ್ನು ನೀಡಿದ್ದೀರಿ, ಆದರೆ ಏನಾಗಬೇಕು ಅದೇ ಆಗುತ್ತದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ನನಗೆ ಸಲಹೆ ನೀಡಿದ್ದಾರೆ. ಹಿರಿಯರ ಮಾತಿಗೆ ತಲೆ ಬಾಗಬೇಕಾಗಿತ್ತು ಎಂದು ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ ಬಗ್ಗೆ ಹೇಳಿದರು.

ಆದರೆ, ನಾನು ನಿಮಗೆ ಹೇಳಲು ಬಯಸುತ್ತೇನೆ (ನನ್ನನ್ನು ಸಿಎಂ ಆಗಿ ನೋಡುವ) ನಿಮ್ಮ ಆಸೆ ಎಂದಿಗೂ ಸುಳ್ಳಾಗುವುದಿಲ್ಲ, ತಾಳ್ಮೆಯಿಂದಿರಿ ಎಂದು ಜನರಿಗೆ ಭರವಸೆ ನೀಡಿದರು. ಸದ್ಯ ಕ್ಷೇತ್ರ ಪ್ರವಾಸದಲ್ಲಿರುವ ಡಿಕೆಶಿ ಮತದಾರರ ಪ್ರೀತಿಗೆ ಧನ್ಯವಾದ ಅರ್ಪಿಸಿದರು. ನಾನು ನಿಮಗೆ ಧನ್ಯವಾದ ಹೇಳಿ ನಿಮ್ಮ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಅಲ್ಲದೆ, ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧರಾಗುವಂತೆ ತಮ್ಮ ಅನುಯಾಯಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ಇದೆ ವೇಳೆ ಸೂಚಿಸಿದರು.

ಕಳೆದ ತಿಂಗಳು ರಾಜ್ಯದಲ್ಲಿ ಸರ್ಕಾರ ರಚನೆಗೂ ಮುನ್ನ ಸಿಎಂ ಯಾರಾಗುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಕಾಂಗ್ರೆಸ್‌ ವಲಯದಲ್ಲಿ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದವು. ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 224 ಸ್ಥಾನಗಳಲ್ಲಿ 135 ಸ್ಥಾನಗಳನ್ನು ಗಳಿಸುವ ಮೂಲಕ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದಿತ್ತು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪರಸ್ಪರ ತೀವ್ರ ಪೈಪೋಟಿ ನಡೆಸಿದರು. ಆದರೆ ಹೈಕಮಾಂಡ್‌ ಪ್ರವೇಶದಿಂದಾಗಿ ಸಿಎಂ ಸ್ಥಾನ ಸಿದ್ದರಾಮಯ್ಯ ಅವರಿಗೆ ಸಿಕ್ಕಿತು.

error: Content is protected !!