ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದ್ದು, ಯಾವುದೇ ಸಾವು ನೋವಿನ ಕುರಿತು ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಗೂಡ್ಸ್ ರೈಲೊಂದು ಹಳಿ ತಪ್ಪಿರುವ ಘಟನೆ ಬರ್ಘಾ ಜಿಲ್ಲೆಯಲ್ಲಿ ನಡೆದಿದೆ.
ಐದು ಬೋಗಿಗಳು ಹಳಿ ತಪ್ಪಿವೆ. ಸಾವು ನೋವಿನ ಬಗ್ಗೆ ಇನ್ನೂ ವರದಿಯಾಗಿಲ್ಲ ಜೂ.2ರಂದು ಬಹನಾಗದಲ್ಲಿ 3 ರೈಲುಗಳ ನಡುವೆ ಡಿಕ್ಕಿಯಾಗಿತ್ತು, ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದಲ್ಲಿ 3 ರೈಲುಗಳ ನಡುವೆ ಡಿಕ್ಕಿಯಾಗಿ 257 ಮಂದಿ ಸಾವನ್ನಪ್ಪಿದ್ದರು.