ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್ನಲ್ಲಿ ದಾವಣಗೆರೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿ.ಪಂ ಸಭಾಂಗಣದಲ್ಲಿ ಸಿಎಂ ಸಭೆ ನಡೆಯಲಿದ್ದು ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ.
ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.