ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ನಿಧನ ಹೊಂದಿದ್ದಾರೆ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ನಿಧನವಾಗಿದ್ದು, ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ವಾರ ಸಚಿವ ಶ್ರೀರಾಮುಲು ಜೊತೆಗೆ ತಾಯಿಗೂ ಕೊರೋನಾ ಬಂದಿತ್ತು. ನಂತರ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ರು. ನಿನ್ನೆ ರಾತ್ರಿ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಫಲಿಸದೆ ತಡರಾತ್ರಿ ಮೃತಪಟ್ಟಿದ್ದಾರೆ. ಇನ್ನು ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ, ಬೆಳಗಿನ ಜಾವ ಕುಟುಂಬ ಸದಸ್ಯರು ಆಪ್ತರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ.