ಕೂಗು ನಿಮ್ಮದು ಧ್ವನಿ ನಮ್ಮದು

ಪಕ್ಷ ಸಂಘಟನೆಗೆ ಮುಂದಾದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಮತಗಳನ್ನು ಪಡೆದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. 4 ದಿನ 31 ಜಿಲ್ಲೆಗಳ ಪ್ರಮುಖರ ಜೊತೆ ಮಾಜಿ ಸಿಎಂ ಹೆಚ್ಡಿಕೆ ಸಭೆ ನಡೆಸಲಿದ್ದಾರೆ. ಇಂದು ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲಾ ನಾಯಕರ ಜತೆ ಸಭೆ ನಡೆಸಲಿದ್ದಾರೆ.

BBMP, ಜಿ.ಪಂ., ತಾ.ಪಂ. ಚುನಾವಣೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಹಾಗೂ ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

error: Content is protected !!