ತುಮಕೂರು: ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಹಾಕಿದ ಕೆಲವೇ ಘಂಟೆಗಳಲ್ಲಿ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಈ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ.
ಸೋಮನಹಳ್ಳಿ ಮೂಲದ ಮಧು ಹಾಗೂ ಶೃತಿ ದಂಪತಿಯ ಚುಚ್ಚು ಮದ್ದು ಪಡೆದು ಮನೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗು ಸಾವನ್ನಪ್ಪಿದೆ. ಬಳಿಕ ಸಾವನ್ನಪ್ಪಿದ ಮಗುವನ್ನು ಆಸ್ಪತ್ರೆ ಮುಂಭಾಗ ಇಟ್ಟು ಮೃತ ಮಗುವಿನ ಸಂಬಂಧಿಕರು ವೈದ್ಯರ ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ
ಪ್ರತಿಭಟನಾ ಸ್ಥಳಕ್ಕೆ ಜೆಡಿಎಸ್ ಶಾಸಕ ಸುರೇಶ್ ಬಾಬು ಭೇಟಿ ಪುಟ್ಟ ಕಂದಮ್ಮನ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ್ದಾರೆ. ಪ್ರಕರಣ ಹಿನ್ನಲೆ ಮಗುವಿನ ಸಾವಿಗೆ ಕಾರಣವಾದವರ ವಿರುದ್ದ ಕೂಡಲೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಸೂಚನೆ ನೀಡಿದ್ದಾರೆ.
ಸದ್ಯ ಘಟನೆ ಸಂಬಂಧ ವೈದ್ಯರ ಹಾಗೂ ಸಿಬ್ಬಂದಿ ಸೇರಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಮಗುವನ್ನು ಕಳೆದಕೊಂಡ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದೆ.ಮಗು ಸಾವಿಗೆ ಕಾರಣವಾದವರ ವಿರುದ್ದ ಹುಳಿಯಾರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.