ಬೆಂಗಳೂರು: ಶಕ್ತಿ ಯೋಜನೆ ಚಾಲನೆಗೆ ಕೆಲ ಗಂಟೆಗಳು ಬಾಕಿ ಇದ್ದು, ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ ಮುಂಭಾಗ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಸಚಿವರು, ಶಾಸಕರು, ಸಂಸದರು. ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ. ಬೆಳಗ್ಗೆ ೧೧ ಗಂಟೆಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಎರಡು ಬಿಎಂಟಿಸಿ ಬಸ್ ಗಳಿಗೆ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಬಳಿಕ ಅದೇ ಬಸ್ ಗಳಲ್ಲಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಟರ್ಮಿನಲ್ ೨ ಗೆ ೧೨ ಗಂಟೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಅಲ್ಲಿ ಶೂನ್ಯದರದ ಟಿಕೆಟ್ ವಿತರಣೆ ಮಾಡುವ ಮೂಲಕ ಸಾಂಕೇತಿಕವಾಗಿ ಯೋಜನೆಗೆ ಚಾಲನೆ ನೀಡಲಾಗುತ್ತದೆ.