ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೇವು. ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ, ಜೆಡಿಎಸ್ ಸ್ನೇಹಿತರು ಟೀಕೆಗಳ ಸುರಿಮಳೆ ಸುರಿಸ್ತಿದ್ದಾರೆ.
ವಿಪಕ್ಷಗಳಿಗೆ ಉತ್ತರ ನೀಡುವ ಸಾಮರ್ಥ್ಯ ನಮ್ಮ ಬಳಿ ಇಲ್ಲ. ಮಂಗಳೂರಿನಲ್ಲಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದೇವು. ಬಹಳ ಚರ್ಚೆ ಮಾಡಿಯೇ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ನಮ್ಮ ರಾಜ್ಯ ದಿವಾಳಿ ಆಗುತ್ತೆ ಅಂತಾ ಬಿಜೆಪಿಯವರು ಹೇಳುತ್ತಿದ್ದಾರೆ ಎಂದರು