ಕೋಲಾರ: ಪ್ರಜಾಯಾತ್ರೆ ಸಮಾವೇಶಗಳಲ್ಲಿ ಭಾಷಣ ಮಾಡುವಾಗ ನಮ್ಮ ಪಕ್ಷಕ್ಕೆ ಮತ ನೀಡಿದರೆ ಸಹಕಾರ ಬ್ಯಾಂಕ್ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು.
ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಒಂದಿದ್ದು ಮತ ಪಡೆದ ಸಿದ್ದರಾಮಯ್ಯನವರು ಸಾಲ ಮನ್ನಾ ಮಾಡದೆ ಮಹಿಳೆಯರಿಗೆ ದ್ರೋಹ ಮಾಡಿದ್ದಾರೆಂದು ಸಾಲ ವಸೂಲಿಗಾರರು ಗ್ರಾಮಕ್ಕೆ ಪ್ರವೇಶ ಮಾಡದಂತೆ ಗ್ರಾಮದಲ್ಲಿ ಪ್ಲೆಕ್ಸ್ ಹಾಕಿ ನಿರ್ಭಂಧ ಹೇರಿ, ಸಾಲ ಕೇಳಲು ಬಾರದಂತೆ ಮಹಿಳೆಯರು ಎಚ್ಚರಿಕೆ ಕೊಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.